ಕುಂದಾಪುರ : ಕುಂದಾಪುರ ತಾಲೂಕು ಭಜನಾ ಮಂಡಳಿಗಳ ಒಕ್ಕೂಟ ಉಡುಪಿ ಜಿಲ್ಲಾ ಭಜನಾ ಮಂಡಳಿಗಳ ಒಕ್ಕೂಟ ಹಾಗೂ ಕುಂದಾಪುರ ತಾಲೂಕಿನ 6 ವಲಯಗಳ ಸಹಯೋಗದೊಂದಿಗೆ ಶ್ರೀ ಕುಂದೇಶ್ವರ ದೇವಸ್ಥಾನದಲ್ಲಿ ಭಜನಾ ಕಮ್ಮಟವು ಸಂಪನ್ನಗೊಂಡಿತು ಹಾಗೂ ಪದಪ್ರಧಾನ ಸಮಾರಂಭ ನೆರವೇರಿತು
ಸಮಾರಂಭವನ್ನು ಶ್ರೀ ಬಿ ಅಪ್ಪಣ್ಣ ಹೆಗ್ಡೆಯವರು ಉದ್ಘಾಟಿಸಿದರು ಮುಖ್ಯ ಅತಿಥಿಗಳಾಗಿ ಆಗಮಿಸಿದ ಶಾಸಕ ಕಿರಣ್ ಕುಮಾರ್ ಕೊಡ್ಗಿಯವರು ಮಾತನಾಡಿ ಭಜನಾ ಕಮ್ಮಟದಲ್ಲಿ ಬಡವ ಶ್ರೀಮಂತ ಎನ್ನುವ ಭೇದ ಭಾವವಿಲ್ಲದೆ ಎಲ್ಲರಲ್ಲೂ ಸಮಾನತೆಯನ್ನು ಕಾಣಲು ಸಾಧ್ಯ ಎಂದರು
ಸಮಾರಂಭದಲ್ಲಿ ಕೊಲ್ಲೂರು ದೇಗುಲದ ಧರ್ಮದರ್ಶಿಗಳಾದ ಚಂದ್ರಶೇಖರ ಶೆಟ್ಟಿ ಕೆರಾಡಿ ಹಾಗೂ ಕುಂದೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಕೃಷ್ಣಾನಂದ ಚಾತ್ರ ವಾಸ್ತುತಜ್ಞ ಬಸವರಾಜ್ ಶೆಟ್ಟಿಗಾರ್ ಜಿಲ್ಲಾ ಭಜನಾ ಒಕ್ಕೂಟದ ಅಧ್ಯಕ್ಷ ಉಮೇಶ್ ಶೆಟ್ಟಿ ಕುಂದಾಪುರ ತಾಲೂಕು ಒಕ್ಕೂಟದ ಅಧ್ಯಕ್ಷರಾದ ನಿತಿನ್ ವಿಠಲವಾಡಿ ಉಪಸ್ಥಿತರಿದ್ದರು ಒಕ್ಕೂಟದ ಗೌರವ ಅಧ್ಯಕ್ಷರಾದ ಜಯಕರ್ ಪೂಜಾರಿ ಸ್ವಾಗತಿಸಿ ತಾಲೂಕು ಒಕ್ಕೂಟದ ಕಾರ್ಯಾಧ್ಯಕ್ಷ ಚಂದ್ರಶೇಖರ್ ಶೆಟ್ಟಿ ಪ್ರಸ್ತಾವನೆಗೈದರು

