ಉಡುಪಿ : ಭಾರತೀಯ ಜನ ಸಂಘದ ಸಂಸ್ಥಾಪಕರಲ್ಲೊಬ್ಬರಾದ ಪಂಡಿತ್ ದೀನ ದಯಾಳ್ ಉಪಾಧ್ಯಾಯರವರ ದೂರದರ್ಶಿತ್ವದ ಚಿಂತನೆಗಳು, ತ್ಯಾಗ, ಬಲಿದಾನ, ಜೀವನಾದರ್ಶಗಳು ಪಕ್ಷದ ಕಾರ್ಯಕರ್ತರಿಗೆ ಸದಾ ಪ್ರೇರಣಾದಾಯಕ ಎಂದು ಬಿಜೆಪಿ ಉಡುಪಿ ಮಾಜಿ ಜಿಲ್ಲಾಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ ಹೇಳಿದರು.
ಅವರು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಜನ ಸಂಘದ ಸಂಸ್ಥಾಪಕ ಪಂಡಿತ್ ದೀನದಯಾಳ್ ಉಪಾಧ್ಯಾಯರವರ ಪುಣ್ಯ ಸಂಸ್ಮರಣೆ ಹಾಗೂ ಸಮರ್ಪಣಾ ದಿನಾಚರಣೆಯ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಏಕಾತ್ಮ ಮಾನವತಾ ವಾದದ ಪ್ರತಿಪಾದಕರಾಗಿದ್ದ ಪಂಡಿತ್ ದೀನದಯಾಳ್ ಉಪಾಧ್ಯಾಯ ರವರ ಅಂತ್ಯೋದಯ ಪರಿಕಲ್ಪನೆಯು ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಅನೇಕ ಯೋಜನೆಗಳಲ್ಲಿ ಸಾಕಾರಗೊಂಡಿದೆ. ಪಂಡಿತ್ ಜೀ ಅವರ ಅನುಮಾನಾಸ್ಪದ ಸಾವು ಇನ್ನೂ ನಿಗೂಢವಾಗಿದ್ದರೂ ಅವರು ಕೋಟ್ಯಾಂತರ ಕಾರ್ಯಕರ್ತರಿಗೆ ಚೈತನ್ಯ ಶಕ್ತಿಯಾಗಿ ಇಂದಿಗೂ ಪ್ರಾತ: ಸ್ಮರಣೀಯರಾಗಿದ್ದಾರೆ ಎಂದು ಮಟ್ಟಾರ್ ತಿಳಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರ ನೇತೃತ್ವದಲ್ಲಿ ಪಕ್ಷದ ಮುಖಂಡರು, ವಿವಿಧ ಸ್ತರದ ಪದಾಧಿಕಾರಿಗಳು, ಜನ ಪ್ರತಿನಿಧಿಗಳು ಹಾಗೂ ಕಾರ್ಯಕರ್ತರು ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ನಿಧಿ ಸಮರ್ಪಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾರಿ ಕೆ. ಉದಯ ಕುಮಾರ್ ಶೆಟ್ಟಿ, ನಿಕಟಪೂರ್ವ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಶಾಸಕರಾದ ಯಶ್ಪಾಲ್ ಎ. ಸುವರ್ಣ, ಸುರೇಶ್ ಶೆಟ್ಟಿ ಗುರ್ಮೆ, ಗುರುರಾಜ್ ಗಂಟಿಹೊಳೆ, ನಿಕಟಪೂರ್ವ ಶಾಸಕ ಲಾಲಾಜಿ ಆರ್. ಮೆಂಡನ್, ಬಿಜೆಪಿ ನಿಕಟಪೂರ್ವ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್, ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಎಸ್.ಟಿ. ಮೋರ್ಚಾ ರಾಜ್ಯ ಕಾರ್ಯದರ್ಶಿ ಉಮೇಶ್ ನಾಯ್ಕ್, ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಚುನಾವಣಾ ಸಂಚಾಲಕ ಕುತ್ಯಾರು ನವೀನ್ ಶೆಟ್ಟಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರವಿ ಅಮೀನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ದಿನಕರ ಶೆಟ್ಟಿ ಹೆರ್ಗ, ಕೆ.ರಾಘವೇಂದ್ರ ಕಿಣಿ, ರೇಷ್ಮಾ ಉದಯ ಕುಮಾರ್ ಶೆಟ್ಟಿ, ನಿಕಟಪೂರ್ವ ಪ್ರಧಾನ ಕಾರ್ಯದರ್ಶಿಗಳಾದ ಸದಾನಂದ ಉಪ್ಪಿನಕುದ್ರು, ಮನೋಹರ್ ಎಸ್. ಕಲ್ಮಾಡಿ, ಜಿಲ್ಲಾ ಕೋಶಾಧಿಕಾರಿ ಪ್ರವೀಣ್ ಕುಮಾರ್ ಶೆಟ್ಟಿ ಕಪೆಟ್ಟು, ದ.ಕ. ಜಿಲ್ಲಾ ಸಹ ಪ್ರಭಾರಿ ರಾಜೇಶ್ ಕಾವೇರಿ, ಜಿಲ್ಲಾ ಕಾರ್ಯದರ್ಶಿ ನಳಿನಿ ಪ್ರದೀಪ್ ರಾವ್, ಜಿಲ್ಲಾ ಸಹ ವಕ್ತಾರರಾದ ಶಿವಕುಮಾರ್ ಅಂಬಲಪಾಡಿ, ಗಿರೀಶ್ ಎಮ್. ಅಂಚನ್, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರಶ್ಮಿತಾ ಬಿ.ಶೆಟ್ಟಿ, ಜಿಲ್ಲಾ ಎಸ್.ಟಿ. ಮೋರ್ಚಾ ಅಧ್ಯಕ್ಷ ನಿತ್ಯಾನಂದ ನಾಯ್ಕ್, ಜಿಲ್ಲಾ ಎಸ್.ಸಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ಕೃಷ್ಣಮೂರ್ತಿ ಡಿ.ಬಿ., ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಆಸಿಫ್ ಕಟಪಾಡಿ, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕರಾದ ವಿಜಯ ಕುಮಾರ್ ಉದ್ಯಾವರ, ಜಗದೀಶ್ ಆಚಾರ್ಯ ಕಪ್ಪೆಟ್ಟು, ಉಡುಪಿ ನಗರ ಉಪಾಧ್ಯಕ್ಷ ಕೃಷ್ಣಪ್ಪ ಜತ್ತನ್, ಪ್ರಧಾನ ಕಾರ್ಯದರ್ಶಿ ದಿನೇಶ್ ಅಮೀನ್, ಉಡುಪಿ ಗ್ರಾಮಾಂತರ ಪ್ರಧಾನ ಕಾರ್ಯದರ್ಶಿ ಸಚಿನ್ ಪೂಜಾರಿ, ಪ್ರಮುಖರಾದ ವಿಜಯ ಭಟ್ ಕಡೆಕಾರ್, ರಾಜು ಕುಲಾಲ್, ರಮ್ಯಾ ರಾವ್, ಅನಿಟಾ ಬೆಲಿಂಡ ಡಿಸೋಜ, ರಾಘವೇಂದ್ರ ಕುತ್ಪಾಡಿ, ದಿನಕರ ಪೂಜಾರಿ, ರೇಖಾ ಜಿ. ಮರಾಟೆ, ಚಂದ್ರಶೇಖರ ಪ್ರಭು, ಶಿವರಾಮ ಕಾಡಿಮಾರ್ ಮತ್ತಿತರರು ಉಪಸ್ಥಿತರಿದ್ದರು