ಉಡುಪಿ : ದೇಶದಾದ್ಯಂತ ಸಣ್ಣ ಸಣ್ಣ ಜಾತಿಗಳನ್ನು ಹುಡುಕಿ ಸ್ಥಾನಮಾನ ನೀಡಿದ ರಾಜಕೀಯ ಪಕ್ಷ ಬಿಜೆಪಿ. ದೇಶದ ಮೊದಲ ಒಬಿಸಿ ಪ್ರಧಾನಿಯನ್ನು ಮಾಡಿರುವುದು ಬಿಜೆಪಿ. ಹಿಂದುತ್ವದ ಜೊತೆಗೆ ಬಲವಾಗಿ ನಿಂತಿರುವ ವರ್ಗ ಒಬಿಸಿ. ಸರ್ವರ ಕಲ್ಯಾಣದ ಜೊತೆಗೆ ಒಬಿಸಿ ವರ್ಗದ ಅಭಿವೃದ್ಧಿಗೆ ವಿಶೇಷ ಒತ್ತು ನೀಡಿರುವ ಬಿಜೆಪಿ ಇಂದು ಹಿಂದುಳಿದ ವರ್ಗಗಳ ಪಕ್ಷವಾಗಿದೆ ಎಂದು ಬಿಜೆಪಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ. ಯವರು ಹೇಳಿದರು.
ಅವರು ಉಡುಪಿ ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿ ನಡೆದ ಬಿಜೆಪಿ ಜಿಲ್ಲಾ ಪದಾಧಿಕಾರಿಗಳ ಸಭೆಯನ್ನುದ್ದೇಶಿಸಿ ಮಾತನಾಡಿದರು. ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಅವಧಿಯಲ್ಲಿ ಜಾರಿಗೆ ತಂದಿರುವ ಜನಪರ ಯೋಜನೆಗಳು ಅತ್ಯಂತ ಶ್ರೇಷ್ಠವಾಗಿದ್ದು, ಕಾಂಗ್ರೆಸ್ ನ ಯೋಜನೆಗಳನ್ನು ಮೀರಿ ನಿಂತಿದೆ. ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ಗ್ಯಾರಂಟಿಗಳು, ಇಲ್ಲದವರಿಂದ ಪಡೆದು ಉಳ್ಳವರಿಗೆ ಕೊಡುವ ಯೋಜನೆಯಾಗಿದೆ. ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ಎಸ್ಸಿಎಸ್ಟಿ ಎಸ್ಟಿಪಿ ಯ ರೂ.11,000 ಕೋಟಿ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ವರ್ಗಾಯಿಸಿದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ದಲಿತ ವಿರೋಧಿ ಎಂಬುದನ್ನು ಸಾಬೀತುಪಡಿಸಿದೆ ಎಂದರು.
ಗುತ್ತಿಗೆದಾರರು ಹೇಳದೇ ಇರುವ, ಬಿಜೆಪಿ ವಿರುದ್ಧ ಕಾಂಗ್ರೆಸ್ ಸ್ವಯಂ ಕಪೋಲಕಲ್ಪಿತ ಸೃಷ್ಟಿಸಿರುವ 40% ಸರಕಾರ ಎಂಬ ಅಭಿಯಾನವೇ ದೊಡ್ಡ ಸುಳ್ಳು. ಇತ್ತೀಚೆಗೆ ರಾಜ್ಯದಲ್ಲಿ ಗುತ್ತಿಗೆದಾರರೊಬ್ಬರ ಮನೆಗೆ ನಡೆದ ಇ.ಡಿ. ದಾಳಿಯಿಂದ ಅಧಿಕಾರಿಗಳು ಕೋಟ್ಯಾಂತರ ರೂಪಾಯಿಗಳನ್ನು ವಶಪಡಿಸಿಕೊಂಡಿರುವುದು ಕಾಂಗ್ರೆಸ್ ಎಟಿಎಮ್ ಸರಕಾರ ಎಂಬ ಪ್ರಧಾನಿ ಮೋದಿ ಮಾತಿಗೆ ಸಾಕ್ಷಿಯಂತಿದೆ. ಇಂದು ದಾಳಿ ಎದುರಿಸುತ್ತಿರುವ ದೇಶದ ಕುರಿತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ಯಾಲೆಸ್ತೀನ್ ಗೆ ಬೆಂಬಲ ಘೋಷಿಸಿರುವ ಕಾಂಗ್ರೆಸ್ ಮಾನಸಿಕತೆ ಪ್ರಶ್ನಾರ್ಥಕವಾಗಿದೆ ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್, ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ,
ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಕುಮಾರ್, ಶಾಸಕರಾದ ಶಾಸಕರಾದ ಯಶ್ಪಾಲ್ ಎ. ಸುವರ್ಣ, ವಿ.ಸುನೀಲ್ ಕುಮಾರ್, ಗುರ್ಮೆ ಸುರೇಶ್ ಶೆಟ್ಟಿ, ಕಿರಣ್ ಕುಮಾರ್ ಕೊಡ್ಗಿ, ಗುರುರಾಜ್ ಗಂಟಿಹೊಳೆ, ನಿಕಟಪೂರ್ವ ಶಾಸಕರಾದ ಕೆ.ರಘುಪತಿ ಭಟ್, ಲಾಲಾಜಿ ಆರ್. ಮೆಂಡನ್, ನಿಕಟಪೂರ್ವ ಜಿಲ್ಲಾಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಜಿಲ್ಲಾ ಉಪಾಧ್ಯಕ್ಷರಾದ ರವಿ ಅಮೀನ್, ಪೆರ್ಣoಕಿಲ ಶ್ರೀಶ ನಾಯಕ್, ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಗೀತಾಂಜಲಿ ಎಮ್. ಸುವರ್ಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ಮನೋಹರ್ ಎಸ್. ಕಲ್ಮಾಡಿ, ಸದಾನಂದ ಉಪ್ಪಿನಕುದ್ರು, ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಎಸ್ಸಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ದಿನಕರ ಬಾಬು, ಎಸ್ಟಿ ಮೋರ್ಚಾ ರಾಜ್ಯ ಕಾರ್ಯದರ್ಶಿ ಉಮೇಶ್ ನಾಯ್ಕ್, ಬಿಜೆಪಿ ಜಿಲ್ಲಾ ಪದಾಧಿಕಾರಿಗಳಾದ ಕೆ.ರಾಘವೇಂದ್ರ ಕಿಣಿ, ಪ್ರವೀಣ್ ಕುಮಾರ್ ಶೆಟ್ಟಿ ಕಪ್ಪೆಟ್ಟು, ಸತ್ಯಾನಂದ ನಾಯಕ್, ನಳಿನಿ ಪ್ರದೀಪ್ ರಾವ್, ರೇಶ್ಮಾ ಉದಯ್ ಶೆಟ್ಟಿ, ಗುರುಪ್ರಸಾದ್ ಶೆಟ್ಟಿ, ಅನಿತಾ ಶ್ರೀಧರ್, ಶಿವಕುಮಾರ್ ಅಂಬಲಪಾಡಿ, ಶ್ರೀನಿಧಿ ಹೆಗ್ಡೆ, ಜಿಲ್ಲಾ ಮೋರ್ಚಾ ಅಧ್ಯಕ್ಷರುಗಳಾದ ವೀಣಾ ಎಸ್. ಶೆಟ್ಟಿ, ಸುರೇಂದ್ರ ಪಣಿಯೂರು, ವಿಖ್ಯಾತ್ ಶೆಟ್ಟಿ, ಪ್ರವೀಣ್ ಕುಮಾರ್ ಗುರ್ಮೆ, ದಾವೂದ್ ಅಬೂಬಕ್ಕರ್, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕ ಜಗದೀಶ್ ಆಚಾರ್ಯ ಕಪ್ಪೆಟ್ಟು, ಮಂಡಲ ಅಧ್ಯಕ್ಷರುಗಳಾದ ಮಹೇಶ್ ಠಾಕೂರ್, ವೀಣಾ ವಿ. ನಾಯ್ಕ್, ಶ್ರೀಕಾಂತ್ ನಾಯಕ್, ಮಹಾವೀರ ಹೆಗ್ಡೆ, ದೀಪಕ್ ಕುಮಾರ್ ಶೆಟ್ಟಿ ಹಾಗೂ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.