ಬೈಂದೂರು : ಲೋಕಸಭೆ ಹಾಗೂ ವಿಧಾನಸಭೆಯಲ್ಲಿ ಮಹಿಳೆಯರಿಗೆ ಮೀಸಲಾತಿಕೊಟ್ಟಿದ್ದು, ಪ್ರಧಾನಿ ನರೇಂದ್ರ ಮೋದಿ ಜಿ.ಪಂ-ತಾ.ಪಂ ಹಾಗೂ ಗ್ರಾಪಂಗಳಲ್ಲಿ ಮೀಸಲಾತಿಕೊಟ್ಟಿದ್ದು, ಮಾಜಿ ಮುಖ್ಯಮಂತ್ರಿಯಡಿಯೂರಪ್ಪ ಎಂದು ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಹೇಳಿದರು.
ಸೋಮವಾರ ಕಿರಿಮಂಜೇಶ್ವರದಲ್ಲಿ ನಡೆದ ಮಂಡಲ ಮಹಿಳಾ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಲೋಕಸಭೆ ಹಾಗೂ ವಿಧಾನ ಸಭೆಯಲ್ಲಿ ಶೇ.33ರಷ್ಟು ಸ್ಥಾನವನ್ನು ಮಹಿಳೆಯರಿಗೆ ನೀಡುವ ಮೂಲಕ ಮಹಿಳಾ ಸಮುದಾಯಕ್ಕೆ ಆದ್ಯತೆಯನ್ನು ನೀಡಿದವರು ನಮ್ಮ ನೆಚ್ಚಿನ ಪ್ರಧಾನಿ ನರೇಂದ್ರ ಮೋದಿಯವರು ಎಂದ ಅವರು, ರಾಜ್ಯದಲ್ಲಿ ಜಿ.ಪಂ-ತಾಪಂ ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ಶೇ. 50ರಷ್ಟು ಮೀಸಲಾತಿಯನ್ನು ಮಹಿಳೆಯರಿಗೆ ಕೊಡುವ ಮೂಲಕ ಯಡಿಯೂರಪ್ಪನವರು ತಾವು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಮಹಿಳಾ ಸಮುದಾಯಕ್ಕೆ ಹೆಚ್ಚಿನ ಆದ್ಯತೆಯನ್ನು ನೀಡಿದ್ದರು ಎಂದರು
ರಾಜ್ಯ ಸರ್ಕಾರ ಮಹಿಳಾ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ. ಇಂತಹ ಸರ್ಕಾರ ಅಧಿಕಾರದಲ್ಲಿ ಇರಬೇಕೆ ಎಂಬುದನ್ನು ನಮ್ಮ ಮತದಾರರು ಯೋಚಿಸಬೇಕಾಗಿದೆ. 10 ಕೆಜಿ ಅಕ್ಕಿ ಕೊಡುತ್ತೇವೆ ಎಂದು ಹೇಳಿದ ಸಿದ್ದರಾಮಯ್ಯನವರು ಇಂದು ಕೇವಲ 5 ಕೆಜಿ ಅಕ್ಕಿ ಕೊಡುತ್ತಿದ್ದಾರೆ. ಈ ಅಕ್ಕಿಯೂ ಸಹ ಪ್ರಧಾನಿ ನರೇಂದ್ರ ಮೋದಿಯವರು ನೀಡುತ್ತಿರುವ ಅಕ್ಕಿಯಾಗಿದೆ ಎಂದು ಹೇಳಿದರು