ಕಾರ್ಕಳ: ಮೂರು ವರ್ಷದ ಮಗುವೊಂದು ನಡೆದುಕೊಂಡು ಹೋಗುತ್ತಿದ್ದ ವೇಳೆ ಆಯತಪ್ಪಿ ನೀರಿನ ಹೊಂಡಕ್ಕೆ ಬಿದ್ದು ಮೃತಪಟ್ಟ ಘಟನೆ ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಾಲ್ಕೂರುಗ್ರಾಮದಲ್ಲಿ ನಡೆದಿದೆಮೃತ ಮಗುವನ್ನು ಕೃತಿಕಾ (3ವರ್ಷ) ಎಂದು ಗುರುತಿಸಲಾಗಿದೆ
ಪೊಲೀಸ್ ಮೂಲಗಳ ಪ್ರಕಾರ ಕೃತಿಕಾ ತನ್ನ ಅಜ್ಜಿಯೊಂದಿಗೆ ಬ್ರಹ್ಮಾವರ ತಾಲೂಕು ನಾಲ್ಕೂರು ಗ್ರಾಮದ ಕಜ್ಕೆ ಅರಮನೆ ಜೆಡ್ಡುವಿನ ಕಂಠದಲ್ಲಿ ಮೊಮ್ಮಕ್ಕಳೊಂದಿಗೆ ನಡೆದುಕೊಂಡು ಹೋಗುತ್ತಿರುವಾಗ ಮೊಮ್ಮಗಳು ಕೃತಿಕಾ (3 ವರ್ಷ) ಆಯತಪ್ಪಿ ಆಕಸ್ಮಿಕವಾಗಿ ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದು ಉಸಿರುಗಟ್ಟಿ ಮೃತಪಟ್ಟಿದೆ