ನೇಣು ಬಿಗಿದು ಆತ್ಮಹತ್ಯೆ
ಕುಂದಾಪುರ: ಸಿದ್ದಾಪುರ ನಿವಾಸಿ ಷಣ್ಮುಖ ಯಾನೆ ಅಣ್ಣಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮರದ ಕೆಲಸ ಮಾಡಿಕೊಂಡಿರುವ ಇವರು ವಿಪರೀತ ಮದ್ಯಪಾನದ ಚಟ ಹೊಂದಿದ್ದರು. ಮಾನಸಿಕ ಖಿನ್ನತೆಗೆ ಉಡುಪಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮನೆಯಲ್ಲಿ ಯಾರು ಇಲ್ಲದ ಸಂದರ್ಭ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಶಂಕರನಾರಾಯಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗಾಂಜಾ ಸೇವಿಸಿದ ಯುವಕನ ಬಂಧನ
ಉಡುಪಿ : ಮಲ್ಪೆ ತೆಂಕನಿಡಿಯೂರು ಸಭಾಭವನ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸಿದ್ದ ಯೋಗೀಶ (22ವರ್ಷ) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ ಬಂಧಿತ ಆರೋಪಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ಗಾಂಜಾ ಸೇವನೆಯ ಬಗ್ಗೆ ಖಚಿತ ಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ ಮಲ್ಪೆ ಪೊಲೀಸರು ಎನ್‌ಡಿಪಿಎಸ್ ಆ್ಯಕ್ಟ್ ನಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ
ಶಿಕ್ಷಕಿ ಆತ್ಮಹತ್ಯೆ
ಕುಂದಾಪುರ : ಹೊಸಂಗಡಿ ಕೆಪಿಸಿ ಶಾಲೆಯಲ್ಲಿ ಗೌರವ ಶಿಕ್ಷಕಿಯಾಗಿ ಕೆಲಸ ಮಾಡಿಕೊಂಡಿರುವ ಭದ್ರಾವತಿ ಮೂಲದ ಸವಿತಾ (40ವರ್ಷ) ಎಂಬವರು ತನ್ನ ವಸತಿ ಗೃಹದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಅವರು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು ಚಿಕಿತ್ಸೆ ಪಡೆಯುತ್ತಿದ್ದರು. ತಾಯಿ ಹೇಮಚಂದ್ರ ನೀಡಿದ ದೂರಿನಂತೆ ಅಮಾಸೆಬೈಲು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

