152
ಮೈಸೂರು : ಭಾನುವಾರ ಮೈಸೂರಿನ ಹೊರವಲಯದಲ್ಲಿ ಭಾರಿ ಪ್ರಮಾಣದ ಡ್ರಗ್ಸ್ ವಶ ಪ್ರಕರಣದ ಸಂಪೂರ್ಣ ಚಿತ್ರಣವನ್ನು ದಾಳಿ ನಡೆಸಿದ್ದ ಮುಂಬೈ ಪೊಲೀಸರು ಸೋಮವಾರ ನೀಡಿದ್ದು ಒಟ್ಟು 390 ಕೋಟಿ ರು. ಮೌಲ್ಯದ 192 ಕೆ.ಜೆ. ಎಂ ಡಿ ಎಂ ಎ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದ್ದು 8 ಜನರನ್ನು ಬಂಧಿಸಲಾಗಿದೆ’ ಎಂದು ತಿಳಿಸಿದ್ದಾರೆ
ಈ ಬಗ್ಗೆ ಮಾತನಾಡಿರುವ ಉಪ ಪೊಲೀಸ್ ಆಯುಕ್ತರ ದತ್ತಾ ನಲವಾಡೆ, ‘ಮೈಸೂರು ದಾಳಿಗೂ ಮುಂಚೆ 8 ಕೋಟಿ ರು. ಮೌಲ್ಯದ 5 ಕೇಜಿ ಮಫೆಡೋನ್ ಡ್ರಗ್ಸ್ ಸಿಕ್ಕಿತ್ತು. ಮೈಸೂರು ದಾಳಿ ನಂತರ 187 ಕೇಜಿ ಮೆಥೆಡ್ರನ್ ಡ್ರಗ್ಸ್ ಸಿಕ್ಕಿದ್ದು, ಅದರ ಮೌಲ್ಯ 382 ಕೋಟಿ ರುಪಾಯಿ ಒಟ್ಟಾರೆ 390 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ

