ಕುಂದಾಪುರ ಕುಂದಾಪುರ ತಾಲೂಕಿನ ಹಟ್ಟಿಯಂಗಡಿ ಶ್ರೀ ಸಿದ್ದಿ ವಿನಾಯಕ ದೇವಸ್ಥಾನಕ್ಕೆ ಭಾನುವಾರ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮೀ ಹೆಬ್ಬಾರ್ಳ ಭೇಟಿ, ನೀಡಿ ದೇವರ ದರ್ಶನ ಪಡೆದರು. ಮಧ್ಯಾಹ್ನದ ವಿಶೇಷ ಪೂಜೆಯಲ್ಲಿಯೂ ಭಾಗಿಯಾದ ಸಚಿವರು, ದೇವರಿಗೆ ವಿಶೇಷ ಸೇವೆ ಸಲ್ಲಿಸಿದರು. ದೇವಸ್ಥಾನದ ಆಡಳಿತ ಧರ್ಮದರ್ಶಿ ಎಚ್. ಬಾಲಚಂದ್ರ ಭಟ್ ಅವರು ದೇವಸ್ಥಾನದ ವತಿಯಿಂದ ಸಚಿವರನ್ನು ಗೌರವಿಸಿದರು. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಕೆ. ಅರುಣ್, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಕುಂದಾಪುರ ಉಪ ವಿಭಾಗದ ಸಹಾಯಕ ಆಯುಕ್ತ ರಶ್ರೀ ಎಸ್.ಆರ್. ಉಪಸ್ಥಿತರಿದ್ದರು