ಶ್ರೀನಗರ: ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುತ್ತಿದ್ದ 370ನೇ ವಿಧಿಯನ್ನು ರದ್ದುಗೊಳಿಸಿದ ಬಳಿಕ ಇದೇ ಮೊದಲ ಬಾರಿ ಪ್ರಧಾನಿ ನರೇಂದ್ರ ಮೋದಿ ಜಮ್ಮು ಕಾಶ್ಮೀರಕ್ಕೆ ಗುರುವಾರ ಭೇಟಿ ನೀಡಿದರು. ಈ ವೇಳೆ 370ನೇ ವಿಧಿ ರದ್ದತಿ ಸಮರ್ಥಿಸಿಕೊಂಡ ಅವರು, ಇದರಿಂದ ಕಾಶ್ಮೀರದಲ್ಲಿ ಹೊಸ ಅಭಿವೃದ್ಧಿಯ ಶಕೆ ಪ್ರಾರಂಭವಾಗಿದೆ. 370ನೇ ವಿಧಿಯನ್ನು ವಿಪಕ್ಷಗಳು ತಮ್ಮ ಸ್ವಹಿತಾಸಕ್ತಿಗೆ ‘ದುರ್ಬಳಕೆ ಮಾಡಿಕೊಳ್ಳುತ್ತಿದ್ದವು ಎಂದು ಟೀಕಿಸಿದರು
ಗುರುವಾರ ಕಾಶ್ಮೀರದಲ್ಲಿ ಹಲವಾರು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಬಕ್ಷಿ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ವಿಕಸಿತ ಭಾರತ ವಿಕಸಿತ ಜಮ್ಮು ಕಾಶ್ಮೀರ ಸಮಾವೇಶದಲ್ಲಿ ಮಾತನಾಡಿದ ಅವರು ‘370ನೇ ವಿಧಿ ರದ್ದತಿಯಿಂದ ಜಮ್ಮು ಕಾಶ್ಮೀರದಲ್ಲಿ ಅಭಿ *ವೃದ್ಧಿಯ ಹೊಸ ಪರ್ವವೇ ಆರಂಭವಾಗಿದೆ. ಪ್ರಸ್ತುತ ಕಾಶ್ಮೀರದಲ್ಲಿ’ ಸ್ವಚ್ಛ ಗಾಳಿ ಬೀಸುತ್ತಿದ್ದು, ಪ್ರವಾಸೋದ್ಯಮಕ್ಕೆ ಜಾಗತಿಕವಾಗಿ ಜನರನ್ನು ಕೈಬೀಸಿ ಕರೆಯುತ್ತಿದೆ. ಇಂದು ಪ್ರವಾಸೋದ್ಯಮ ಮತ್ತು ರೈತರಿಗೆ ನೆರವಾಗುವಂತಹ 5 ಸಾವಿರ ಕೋಟಿ ರು. ವೆಚ್ಚದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ಕೊಡಲಾಗಿದೆ. ಈ ಮೂಲಕ ಜಮ್ಮು ಕಾಶ್ಮೀರದ ಜನತೆಯನ್ನು ಸಬಲೀಕರಣಗೊಳಿಸಿ ಕಾಶ್ಮೀರವನ್ನು ಭಾರತದ ಮುಕುಟದಂತೆ ಕಂಗೊಳಿಸುವ ರೀತಿಯಲ್ಲಿ ಅಭಿವೃದ್ಧಿ ಮಾಡುವ ಸಂಕಲ್ಪ ತೊಡಲಾಗಿದೆ’ ಎಂದು ತಿಳಿಸಿದರು