Home Uncategorizedರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾಕ್ಟರ್ ತಿಪ್ಪೇಸ್ವಾಮಿ ಅವರೊಂದಿಗೆ ಸಂವಾದ ಕಾರ್ಯಕ್ರಮ

ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾಕ್ಟರ್ ತಿಪ್ಪೇಸ್ವಾಮಿ ಅವರೊಂದಿಗೆ ಸಂವಾದ ಕಾರ್ಯಕ್ರಮ

by Kundapur Xpress

ಕೋಟೇಶ್ವರ : ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣೆ ಆಯೋಗ ಬೆಂಗಳೂರು, ಪೋಲಿಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಉಡುಪಿ ಜಿಲ್ಲಾ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ತಾಲೂಕು ಆಡಳಿತ, ತಾಲೂಕು ಪಂಚಾಯತ್, ಕರ್ನಾಟಕ ಪಬ್ಲಿಕ್ ಸ್ಕೂಲ್ ಕೋಟೇಶ್ವರ ಪ್ರೌಢಶಾಲಾ ವಿಭಾಗ ಇವರ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರೌಢಶಾಲಾ ವಿಭಾಗದ ಸಭಾಂಗಣದಲ್ಲಿ ನಡೆದ ಮಕ್ಕಳೊಂದಿಗೆ ಸಂವಾದ ಕಾರ್ಯಕ್ರಮವನ್ನು ಡಾಕ್ಟರ್ ತಿಪ್ಪೇಸ್ವಾಮಿ ಕೆ ಟಿ ಮಾನ್ಯ ಸದಸ್ಯರು, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೆಂಗಳೂರು ಇವರು ಕಾರ್ಯಕ್ರಮವನ್ನು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಮಕ್ಕಳು ದೇಶದ ನಿಜವಾದ ಸಂಪತ್ತು. ಮಕ್ಕಳ ಹಕ್ಕುಗಳ ರಕ್ಷಣೆ ಸರ್ವರ ಜವಾಬ್ದಾರಿಯಾಗಿದೆ. ಗ್ರಾಪಂ, ಜಿಪಂನಿಂದ ಹಿಡಿದು ಎಲ್ಲ ಇಲಾಖೆಗಳು ಮಕ್ಕಳ ಹಕ್ಕುಗಳ ರಕ್ಷಣೆ ನಿಟ್ಟಿನಲ್ಲಿ ಸಮನ್ವಯ ಹಾಗೂ ಕ್ರಿಯಾಶೀಲವಾಗಿ ಕಾರ್ಯ ನಿರ್ವಹಿಸುವ ಅಗತ್ಯವಿದೆ ಎಂದರು

ಕುಂದಾಪುರ ತಾಲೂಕಿನ 8 ಶಾಲೆಗಳ ಸುಮಾರು 150ಕ್ಕೂ ಮೇಲ್ಪಟ್ಟು ಮಕ್ಕಳು ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು ಕಾರ್ಯಕ್ರಮದ ಅಧ್ಯಕ್ಷತೆ ಶ್ರೀ ಲೋಕೇಶ್ ಸಿ ಉಪನಿರ್ದೇಶಕರು ಶಾಲಾ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಇವರು ವಹಿಸಿದ್ದು ಸಭೆಯಲ್ಲಿ ಪ್ರಕಾಶ್ ಶೆಟ್ಟಿ ಪ್ರಾಂಶುಪಾಲರು ಕರ್ನಾಟಕ ಪಬ್ಲಿಕ್ ಸ್ಕೂಲ್ ಕೊಟೇಶ್ವರ ಶ್ರೀ ವಿನಯ್ ಉಪ ತಹಶೀಲ್ದಾರ್ ಕುಂದಾಪುರ ತಾಲೂಕು ಚಂದ್ರಶೇಖರ್ ಶೆಟ್ಟಿ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿಗಳು ನಾಗರತ್ನ ನಾಯಕ್ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಉಡುಪಿ ಜಿಲ್ಲೆ ವಿಜೇಂದ್ರ ಕೆ ಕಾರ್ಮಿಕ ನಿರೀಕ್ಷಕರು ಕುಂದಾಪುರ ಸತೀಶ್ ಪ್ಲಾನಿಂಗ್ ಆಫೀಸರ್ ತಾಲೂಕು ಪಂಚಾಯತ್ ಶಾರದಾ ನಾಯಕ್ ಉಪ ಯೋಜನಾ ಸಮನ್ವಯಾಧಿಕಾರಿಗಳು ಉಡುಪಿ ದೀಪಶೆಟ್ಟಿ ಡಯಟ್ ಉಪನ್ಯಾಸಕರು ಉಡುಪಿ ಜಿಲ್ಲೆ ಡಾ. ಶೋಭಾ ವೈದ್ಯಾಧಿಕಾರಿ ಕುಂದಾಪುರ ತಾಲೂಕು ರಮೇಶ್ ಕುಲಾಲ್ ಸಹಾಯಕ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ಕುಂದಾಪುರ ರವೀಂದ್ರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕುಂದಾಪುರ ಉಪಸ್ಥಿತರಿದ್ದರು ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಸಂತೋಷ್ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿ ಉಪ ಪ್ರಾಂಶುಪಾಲ ಚಂದ್ರಶೇಖರ್ ಶೆಟ್ಟಿ ಸ್ವಾಗತಿಸಿದರು ಕ್ಷೇತ್ರ ಶಿಕ್ಷಣಾಧಿಕಾರಿ ಶೋಭಾ ಶೆಟ್ಟಿ ವಂದಿಸಿದರು

Related Articles