ಕುಂದಾಪುರ : ಲಯನ್ಸ್ ಕ್ಲಬ್ ಹಂಗಳೂರು ಇವರ ವತಿಯಿಂದ ಸುಮಾರು 60 ಲಕ್ಷ ರೂ. ವೆಚ್ಚದಲ್ಲಿ ನವೀಕರಣಗೊಂಡ ಕುಂದಾಪುರ ರೈಲು ನಿಲ್ದಾಣದ ಫ್ಲಾಟ್ ಫಾರ್ಮ್, ನೂತನ ಮೇಲ್ಪಾವಣಿ ಹಾಗೂ ಹೂತೋಟ ಸುಂದರೀಕರಣದ ಉದ್ಘಾಟನೆಯನ್ನು ಕೇಂದ್ರದ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ನಾಳೆ ಜೂ.13 ರಂದು ಸಂಜೆ 3.00 ಗಂಟೆಗೆ ಉದ್ಘಾಟಿಸಲಿದ್ದಾರೆ ಎಂದು ಕೊಂಕಣ ರೈಲ್ವೆ ಸಲಹಾ ಸಮಿತಿ ಸದಸ್ಯ ಗಣೇಶ್ ಪುತ್ರನ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈಲ್ವೆ ನಿಲ್ದಾಣದ ಅಭಿವೃದ್ಧಿಗೆ ಖಾಸಗಿ ಸಂಸ್ಥೆಯೊಂದು ಇಷ್ಟು ದೊಡ್ಡದ ಕೊಡುಗೆ ನೀಡುತ್ತಿರುವುದು ರಾಜ್ಯದಲ್ಲೇ ಮೊದಲು ಎಂದರು.
ಮಳೆಗಾಲ ಮತ್ತು ಬೇಸಿಗೆಯಲ್ಲಿ ಪ್ರಯಾಣಿಕರಿಗೆ ಆಗುತ್ತಿರುವ ತೊಂದರೆಗಳನ್ನು ಮನಗಂಡು ಲಯನ್ಸ್ ಕ್ಲಬ್ ಹಂಗಳೂರು ಕೊಂಕಣ ರೈಲ್ವೆಯೊಂದಿಗೆ ಸಮನ್ವತೆ ಸಾಧಿಸಿಕೊಂಡು ರೈಲ್ವೆ ಇಲಾಖೆಯ ಮಾರ್ಗ ಸೂಚಿಯಂತೆ ಫ್ಲಾಟ್ ಫಾರ್ಮ್ ನವೀಕರಣ ಹಾಗೂ ನೂತನ ಮೇಲ್ಪಾವಣಿ ಮಾಡಲಾಗಿದೆ.
ಸಮಾರಂಭದಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಲಿ, ಕೊಂಕಣ ರೈಲ್ವೆ ನಿರ್ದೇಶಕ ಸುನೀಲ್ ಗುಪ್ತ, ಲಯನ್ಸ್ ಜಿಲ್ಲಾ ರಾಜ್ಯಪಾಲ ಮಹಮ್ಮದ್ ಹನೀಫ್, ಹಂಗಳೂರು ಲಯನ್ಸ್ ಕ್ಲಬ್ ಅಧ್ಯಕ್ಷ ರೋವನ್ ಡಿಕೋಸ್ತಾ ಸೇರಿದಂತೆ ಲಯನ್ಸ್ ಪದಾಧಿಕಾರಿಗಳು, ಜನಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿ ದ್ದಾರೆ ಎಂದು ತಿಳಿಸಿದರು

