ಭದ್ರಾವತಿ : ಚಿಕಿತ್ಸೆಗಾಗಿ ಗೃಹಿಣಿಯೋರ್ವರು ಶಿವಮೊಗ್ಗದ ಆಸ್ಪತ್ರೆಯೊಂದರಲ್ಲಿ ದಾಖಲಾಗಿದ್ದು ಸೋಮವಾರ ರಾತ್ರಿ ಅವರು ನಿಧನರಾಗಿದ್ದಾರೆಂದು ವೈದ್ಯರು ದೃಢೀಕರಿಸಿದ್ದಾರೆ ಮಂಗಳವಾರ ಬೆಳಗ್ಗೆ ಅವರ ನಿವಾಸಕ್ಕೆ ಮೃತ ದೇಹವನ್ನು ಅಂಬುಲೆನ್ಸ್ ನಲ್ಲಿ ತಂದು ಇಳಿಸುವಾಗ ಮಹಿಳೆಯು ಕಣ್ಣೆರೆದು ಉಸಿರಾಡಿದ ವಿಸ್ಮಯಕಾರಿ ಘಟನೆ ಭದ್ರಾವತಿಯ ಹಳೇನಗರ ವ್ಯಾಪ್ತಿಯ ಗಾಂಧಿನಗರದಲ್ಲಿ ನಡೆದಿದೆ
ಗಾಂಧಿನಗರ ನಿವಾಸಿ ಗುತ್ತಿಗೆದಾರ ಸುಬ್ರಮಣಿ ಅವರ ಪತ್ನಿ ಮೀನಾಕ್ಷಿ(52), ಅವರನ್ನು ಅನಾರೋಗ್ಯ ನಿಮಿತ್ತ ಶಿವಮೊಗ್ಗ ನಾರಾಯಣ ಹೃದಯಾಲಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ರಾತ್ರಿ 11.30ಕ್ಕೆ ನಿಧನರಾದರೆಂದು ವೈದ್ಯರು ದೃಢಪಡಿಸಿದ್ದರು. ವಿಷಯ ತಿಳಿದ ಅವರ ಬಂಧು ಬಳಗ ಸೇರಿದಂತೆ ನೂರಾರು ಮಂದಿ ಅವರ ನಿವಾಸದ ಬಳಿ ನೆರೆದಿದ್ದರು. ಮಂಗಳವಾರ ಬೆಳಗ್ಗೆ ಮೃತದೇಹ ಅವರ ನಿವಾಸಕ್ಕೆ ತಂದು ಇಳಿಸುವಾಗ ಮೃತರಾಗಿದ್ದವರು ಕಣ್ಣೆರೆದು ನೋಡಿ ಉಸಿರಾಡಿದ್ದಾರೆ.
ಕುಟುಂಬಸ್ಥರು ಅಚ್ಚರಿಗೊಂಡ ಕುಟುಂಬಸ್ಥರು ನೀರು ಕುಡಿಸಿದ್ದಾರೆ. ತಕ್ಷಣವೇ ಸಮೀಪದ ಭದ್ರಾ ನರ್ಸಿಂಗ್ ಹೋಂಗೆ ಅವರನ್ಹೋನು ಕರೆದುಕೊಂಡು ಹೋಗಿ ಪರೀಕ್ಷಿಸಿಕೊಂಡು ನಂತರ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗ ಮಲ್ನಾಡ್ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ.
ಈಗ ಅವರು ಆರೋಗ್ಯವಾಗಿದ್ದು ಯಾರಾದರೂ ಮಾತನಾಡಿದರೆ ಉತ್ತರಿಸುತ್ತಾರೆಂದು ಕುಟುಂಬ ಮೂಲಗಳು ತಿಳಿಸಿವೆ ವಾಹನದಲ್ಲಿ ಮೃತದೇಹ ತಂದು ಇಳಿಸಿದಾಗ ಕಣ್ಣೆರೆದು ಉಸಿರಾಡಿದನ್ನು ಕಣ್ಣಾರೆ ಕಂಡು ಬಂಧುಗಳು ಆಶ್ಚರ್ಯ ಚಕಿತರಾಗಿದ್ದು ಭಗವಂತ ಅವರಿಗೆ ಇನ್ನೂ ಆಯುರಾರೋಗ್ಯ ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ

