109
ಉಡುಪಿ : ಮುಂಬರುವ ರಾಜ್ಯ ಬಜೆಟ್‌ನಲ್ಲಿ ಉಡುಪಿ ಕ್ಷೇತ್ರದ ಅಭಿವೃದ್ದಿ ಯೋಜನೆಗಳಿಗೆ ವಿಶೇಷ ಅನುದಾನ ಹಾಗೂ ತುಳುನಾಡಿನ ಧಾರ್ಮಿಕ ಆಚರಣೆಗೆ ಅವಕಾಶ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಗುರುವಾರ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಮನವಿ ಮಾಡಿದರು.
ಶಿಕ್ಷಣ ಕ್ಷೇತ್ರದಲ್ಲಿ ನಿರಂತರವಾಗಿ ಉತ್ತಮ ಸಾಧನೆ ಮಾಡುತ್ತಿರುವ ಉಡುಪಿ ಜಿಲ್ಲೆಯ ಶಾಲೆಗಳು ಮೂಲ ಸೌಕರ್ಯ ಅಭಿವೃದ್ಧಿಗೆ ವಿಶೇಷ ಅನುದಾನ ಹಾಗೂ ನೂತನ ಜಿಲ್ಲಾಸ್ಪತ್ರೆಯ ಕಟ್ಟಡ ಕಾರ್ಯಾಚರಣೆಗೆ ಅಗತ್ಯವಿರುವ ಅನುದಾನದ ಬಗ್ಗೆ ಮುಖ್ಯಮಂತ್ರಿಗಳ ಗಮನ ಸೆಳೆದರು

