Home » ಸಿಎಂ ಪತ್ನಿ,ಸಚಿವ ಬೈರತಿ ಸುರೇಶ್‌ಗೆ ಇ.ಡಿ ಬುಲಾವ್
 

ಸಿಎಂ ಪತ್ನಿ,ಸಚಿವ ಬೈರತಿ ಸುರೇಶ್‌ಗೆ ಇ.ಡಿ ಬುಲಾವ್

ಮುಡ ಪ್ರಕರಣ

by Kundapur Xpress
Spread the love

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನ ಹಂಚಿಕೆ ಹಗರಣವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮತ್ತಷ್ಟು ಸಂಕಷ್ಟಕ್ಕೀಡು ಮಾಡಿದ್ದು, ಅವರ ಪತ್ನಿ ಪಾರ್ವತಿ ಮತ್ತು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ನಿರ್ದೇಶನಾಲಯ (ಇ.ಡಿ) ವಿಚಾರಣೆಗೆ ಹಾಜರಾಗುವಂತೆ ಇದೇ ಮೊದಲ ಬಾರಿಗೆ ನೋಟಿಸ್ ಜಾರಿ ಮಾಡಿದೆ. ಅವರಿಗೆ 

ಇದರ ಬೆನ್ನಲ್ಲೇ ಸಿದ್ದರಾಮಯ್ಯ ಪತ್ನಿ ಪಾರ್ವತಿ ಮತ್ತು ಸಚಿವ ಬೈರತಿ ಸುರೇಶ್ ಹೈಕೋರ್ಟ್‌ನಲ್ಲಿ ಪ್ರತ್ಯೇಕ ಅರ್ಜಿ ಸಲ್ಲಿಸಿದ್ದು, ಈ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಧಾರವಾಡ ಹೈಕೋರ್ಟ್ ಪೀಠ ಫೆ.10 ರವರೆಗೆ ವಿಚಾರಣೆಗೆ ಮಧ್ಯಂತರ ತಡೆ ನೀಡಿ ಆದೇಶಿಸಿದೆ. ನ್ಯಾಯಾಲಯದ ಈ ಆದೇಶದಿಂದಾಗಿ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ಮುಖ್ಯಮಂತ್ರಿ ಪತ್ನಿ ಹಾಗೂ ಸಚಿವ ಬೈರತಿ ಸುರೇಶ್‌ಗೆ ತಾತ್ಕಾಲಿಕ ‘ರಿಲೀಫ್ ದೊರಕಿದೆ. ಅರ್ಜಿಗಳ ಮುಂದಿನ ವಿಚಾರಣೆವರೆಗೆ ಇ.ಡಿ. ಮುಂದೆ ವಿಚಾರಣೆಗೆ ಹಾಜರಾಗುವುದು ತಪ್ಪಿದೆ.

ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಕೋಟ್ಯಂತರ ರು. ಅಕ್ರಮ ಹಣ ವರ್ಗಾವಣೆಯಾಗಿದೆ ಎಂದು ಸಾಮಾಜಿಕ ‘ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿಗೆ ದೂರು ಸಲ್ಲಿಸಿದ್ದರು. 

 

Related Articles

error: Content is protected !!