Home » ಚಿತ್ರಹಿಂಸೆಯೊಂದಿಗೆ ಕರೆಂಟ್‌ ಶಾಕ್‌ ನೀಡಿದ ಡಿʼಗ್ಯಾಂಗ್
 

ಚಿತ್ರಹಿಂಸೆಯೊಂದಿಗೆ ಕರೆಂಟ್‌ ಶಾಕ್‌ ನೀಡಿದ ಡಿʼಗ್ಯಾಂಗ್

ಮತ್ತೇ 5 ದಿನ ಕಸ್ಟಡಿ

by Kundapur Xpress
Spread the love

ಬೆಂಗಳೂರು : ಚಿತ್ರ ನಟ ದರ್ಶನ್ ಹಾಗೂ ಆತನ ಸಹಚರರು ಚಿತ್ರದುರ್ಗದ ರೇಣುಕಾಸ್ವಾಮಿ ಮೇಲೆ ದೈಹಿಕ ಹಲ್ಲೆ ಮಾತ್ರವಲ್ಲದೆ, ಆತನಿಗೆ ವಿದ್ಯುತ್ ಶಾಕ್ ಕೂಡ ನೀಡಿದ್ದರು ಎಂಬ ಆಘಾತಕಾರಿ ಸಂಗತಿ ಪೊಲೀಸರ ತನಿಖೆಯಲ್ಲಿ ಬಯಲಾಗಿದೆ. ಮೃತನಿಗೆ ವಿದ್ಯುತ್ ಶಾಕ್ ಕೊಟ್ಟು ಹಿಂಸಿಸಿರುವ ವಿಚಾರವನ್ನು ನ್ಯಾಯಾಲಯಕ್ಕೆ ತಿಳಿಸಿದ ಸರ್ಕಾರಿ ವಿಶೇಷ ಅಭಿಯೋಜಕ  ಪಿ.ಪ್ರಸನ್ನಕುಮಾರ್‌ ಅವರು, ಈಗ ವಿದ್ಯುತ್ ಶಾಕ್ ಕೊಟ್ಟಿದ್ದ ಸಲಕರಣೆ (ಡಿವೈಸ್)ಯನ್ನು ಜಪ್ತಿ ಮಾಡಬೇಕಿರುವ ಕಾರಣ ದರ್ಶನ್ ಗ್ಯಾಂಗ್ ಅನ್ನು ಮತ್ತೆ ಪೊಲೀಸ್ ಕಸ್ಟಡಿಗೆ ಒಪ್ಪಿಸುವಂತೆ ವಾದ ಮಂಡಿಸಿದ್ದಾರೆ.ದರ್ಶನ್‌ ಸೇರಿ ಒಟ್ಟು 16 ಮಂದಿಗೆ 5 ದಿನಗಳ ಕಾಲ ಪೊಲೀಸ್‌ ಕಸ್ಟಡಿ ವಿಧಿಸಿ ನ್ಯಾಯಾಲಯ ಆದೇಶಿಸಿದೆ

ರೇಣುಕಾಸ್ವಾಮಿಗೆ ಕಾಲಿನಿಂದ ಫುಟ್ಬಾಲ್ ನಂತೆ ಒದ್ದು, ಮರ್ಮಾಂಗಕ್ಕೆ ಹೊಡೆದು, ಕೈ-ಕಾಲುಗಳನ್ನು ಹಿಡಿದು ಜೋಲಿಯಾಡಿ, ದೊಣ್ಣೆ, ಮರದ ತುಂಡುಗಳು ಹಾಗೂ ಹಗ್ಗದಿಂದ ಹೊಡೆದು ಮನಬಂದಂತೆ ಚಿತ್ರ ಹಿಂಸೆ ನೀಡಿ ಕೊಂದಿದ್ದು ಬೆಳಕಿಗೆ ಬಂದಿತ್ತು. ಆದರೆ ಆತನಿಗೆ ವಿದ್ಯುತ್ ಶಾಕ್ ಸಹ ಕೊಟ್ಟಿದ್ದರು ಎಂಬ ವಿಚಾರ ಇದೀಗ ಬಹಿರಂಗವಾಗಿದೆ.

ದರ್ಶನ್‌ ತನ್ನ ಪ್ರೇಯಸಿ ಪವಿತ್ರಾಗೌಡಳಿಗೆ ಅಶ್ಲೀಲ ಸಂದೇಶ ಕಳುಹಿಸಿದ್ದಕ್ಕೆ ಕೋಪಗೊಂಡು ಚಿತ್ರದುರ್ಗ ದಿಂದ ರೇಣುಕಾಸ್ವಾಮಿಯನ್ನು ಜೂ.8ರಂದು ತನ್ನ ಸಹಚರರ ಮೂಲಕ ಅಪಹರಿಸಿ ನಗರಕ್ಕೆ  ಕರೆಸಿದ್ದರು. ರಾಜರಾಜೇಶ್ವರಿ ನಗರದ ಪಟ್ಟಣಗೆರೆ ಶೆಡ್‌ಗೆ ಕರೆದೊಯ್ದು ಆತನ ಮೇಲೆ ದರ್ಶನ್ ಗ್ಯಾಂಗ್‌ ಚಿತ್ರ ಹಿಂಸೆ ನೀಡಿತ್ತು

 

Related Articles

error: Content is protected !!