ಏ. 12 : ಖಾರ್ವಿಕೇರಿ ಶ್ರೀ ಕ್ಷೇತ್ರದಲ್ಲಿ ಬ್ರಹ್ಮಕಲಶ
ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ಖಾರ್ವಿಕೇರಿಯ ಶ್ರೀ ನವದುರ್ಗಾದೇವಿ ಶಾಂತೇರಿ ಕಾಮಾಕ್ಷಿ ದೇವಸ್ಥಾನದಲ್ಲಿ ವರ್ಷಂಪ್ರತಿ ನಡೆಯುವ 22ನೇ ವರ್ಷದ ಪ್ರತಿಷ್ಠಾ ವರ್ಧಂತಿ ಮಹೋತ್ಸವದ ಅಂಗವಾಗಿ ‘ಬ್ರಹ್ಮ ಕಲಶೋತ್ಸವ’ ವಿದ್ವಾನ್ ಕೋಟ ಕೆ. ಚಂದ್ರಶೇಖರ್ ಸೋಮಯಾಜಿ ಅವರ ನೇತೃತ್ವದಲ್ಲಿ ಏ. 12 ರಂದು ಜರಗಲಿದೆ.
ಪ್ರತಿಷ್ಠಾ ವರ್ಧಂತಿ ಉತ್ಸವದ ಪ್ರಯುಕ್ತ ಏ. 11 ರಂದು ಸಂಜೆ 6ಕ್ಕೆ ದೇವತಾ ಪ್ರಾರ್ಥನೆ, ಪುಣ್ಯಾಹ ವಾಚನ, ಸ್ಥಾನಶುದ್ಧಿ, ವಾಸ್ತು ಪೂಜೆ, ರಾಕ್ಷೋಘ್ನ ಹೋಮ, ಬ್ರಹ್ಮಕಲಶ ಸ್ಥಾಪನೆ, ಕಲಾಭಿವೃದ್ಧಿ ಹೋಮ ನಡೆಯಲಿದೆ. ಏ. 12 ರಂದು ಬೆಳಗ್ಗೆ 8ಕ್ಕೆ ಪುಣ್ಯಾಹ ವಾಚನ, ಪ್ರಧಾನ ಹೋಮ, ಬ್ರಹ್ಮ ಕಲಶಾಭಿಷೇಕ, ಮಹಾಪೂಜೆ, ಮಧ್ಯಾಹ್ನ 12.30ಕ್ಕೆ ಮಹಾ ಮಂಗಳಾರತಿ, ತೀರ್ಥ ಪ್ರಸಾದ ವಿತರಣೆ, ಬಳಿಕ ಸಾರ್ವಜನಿಕ ಮಹಾ ‘ಅನ್ನಸಂತರ್ಪಣೆ’ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ 12 ರಿಂದ ಪಂಚಮಿ ಮೆಲೋಡಿಸ್- ಕಂಚಗೋಡು ಅವರಿಂದ ಕರೋಕೆ ‘ಭಕ್ತಿಗಾಯನ ಸುಧೆ’ ನಡೆಯಲಿದೆ. ಸಂಜೆ 6 ರಿಂದ ಖಾರ್ವಿಕೇರಿ ಶ್ರೀ ಮಹಾಕಾಳಿ ಭಜನಾ ಮಂಡಳಿಯಿಂದ ಭಜನೆ ಹಾಗೂ ರಾತ್ರಿ 8 ಗಂಟೆಯಿಂದ ವಿಶೇಷ ರಾತ್ರಿ ಪೂಜೆ ನಡೆಯಲಿದೆ ಎಂದು ದೇಗುಲದ ಪ್ರಕಟಣೆ ತಿಳಿಸಿದೆ.