ಕುಂದಾಪುರ : ತನ್ನ ಕರ್ತವ್ಯನಿಷ್ಠೆ ಸ್ನೇಹಶೀಲ ಗುಣದಿಂದ ನಾಗರಿಕರ ಮೆಚ್ಚುಗೆಗೆ ಪಾತ್ರರಾಗಿದ್ದ ನಂಜಪ್ಪ ಅವರ ನಿಧನಕ್ಕೆ ಕುಂದಾಪುರದ ನಾಗರಿಕರು ಕಂಬನಿ ಮಿಡಿದಿದ್ದಾರೆ
ಗುರುವಾರ ಬೆಳಗ್ಗೆ ಕುಂದಾಪುರ ನಗರ ಠಾಣೆಯಲ್ಲಿ ಪೊಲೀಸ್ ವೃತ್ತ ನಿರೀಕ್ಷಕ ನಂಜಪ್ಪ ಅವರಿಗೆ ಸಕಲ ಸರಕಾರಿ ಗೌರವಗಳೊಂದಿಗೆ ಅಂತಿಮ ನಮನ ಸಲ್ಲಿಸಲಾಯಿತು.
ಮೃತರ ಗೌರವಾರ್ಥ ಗಾಳಿಯಲ್ಲಿ 3 ಸುತ್ತು ಕುಶಲ ತೋಪು ಹಾರಿಸಿ ಗೌರವ ಸಲ್ಲಿಸಲಾಯಿತು. ಕುಂದಾಪುರ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ರಾಜು ಎನ್., ತಹಸೀಲ್ದಾರ ಪ್ರದೀಪ ಕುರುಡೇಕರ್, ಸಹಾಯಕ ಸರಕಾರಿ ಅಭಿಯೋಜಕ ಉದಯ ಕುಮಾರ್, ಕುಂದಾಪುರ ಶಾಸಕ ಕಿರಣ್ ಕುಮಾರ ಕೊಡ್ಡಿ, ಮಾಜಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ಪುರಸಭೆ ಅಧ್ಯಕ್ಷ ಮೋಹನದಾಸ ಶೆಣೈ, ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ವಿ.ಪ್ರಭಾಕರ್, ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕಿಶೋರ್, ಕಾಂಗ್ರೆಸ್ ಮುಖಂಡ ಮೊಳಹಳ್ಳಿ ದಿನೇಶ್ ಹೆಗ್ಡೆ, ವಿಕಾಸ್ ಹೆಗ್ಡೆ, ಕುಂದಾಪುರ ವಕೀಲರ ಸಂಘದ ಮಾಜಿ ಅಧ್ಯಕ್ಷರಾದ ಸಳ್ವಾಡಿ ನಿರಂಜನ ಹೆಗ್ಡೆ, ಪ್ರಮೋದ್ ಹಂದೆ, ಸಂಘ ಸಂಸ್ಥೆಗಳ ಪ್ರಮುಖರು, ಪುರಸಭೆ ಸದಸ್ಯರು ಹಾಗೂ ಸನ್ನಿಧಿ ಟ್ರಾವೆಲ್ಸ್ ಮಾಲಕರಾದ ಸತೀಶ್ ಶೆಟ್ಟಿ ಹಾಗೂ ಸನ್ನಿಧಿ ಶೆಟ್ಟಿ ಅಂತಿಮ ನಮನ ಸಲ್ಲಿಸಿದರು.
ಕುಂದಾಪುರ ಡಿವೈಎಸ್ಪಿ ಎಚ್.ಡಿ.ಕುಲಕರ್ಣಿ, ಶಂಕರನಾರಾಯಣ ಸರ್ಕಲ್ ಇನ್ಸ್‌ಪೆಕ್ಟರ್ ಜಯರಾಂ ಗೌಡ, ಬೈಂದೂರು ಸರ್ಕಲ್ ಇನ್ಸ್‌ಪೆಕ್ಟರ್ ಸವಿತ್ರತೇಜ್, ಕುಂದಾಪುರ ಪೊಲೀಸ್ ಉಪವಿಭಾಗದ ಎಲ್ಲ ಠಾಣೆಗಳು ಪಿಎಸ್‌ಐ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಸಾರ್ವಜನಿಕ ದರ್ಶನದ ಬಳಿಕ ನಂಜಪ್ಪ ಅವರ ಪಾರ್ಥಿವ ಶರೀರವನ್ನು ಹುಟ್ಟೂರು. ಶಿವಮೊಗ್ಗದ ಭದ್ರಾವತಿಗೆ ಕೊಂಡೊಯ್ಯಲಾಯಿತು. ಅಲ್ಲಿ ಅಂತಿಮ ವಿಧಿ ವಿಧಾನ ನಡೆಯಿತು ಎಂದು ಕುಟುಂಬ ವರ್ಗ ತಿಳಿಸಿದೆ

