Home » ಎಸ್ ಐ ಟಿ ತನಿಖೆ ನಿಷ್ಪಕ್ಷಪಾತವಾಗಿ ನಡೆಯುತ್ತಿಲ್ಲ
 

ಎಸ್ ಐ ಟಿ ತನಿಖೆ ನಿಷ್ಪಕ್ಷಪಾತವಾಗಿ ನಡೆಯುತ್ತಿಲ್ಲ

ಆರ್‌ ಅಶೋಕ್

by Kundapur Xpress
Spread the love

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಅವ್ಯವಹಾರದ ತನಿಖೆಯನ್ನು ಎಸ್ ಐ ಟಿ ನಿಷ್ಪಕ್ಷಪಾತವಾಗಿ ನಡೆಯುತ್ತಿಲ್ಲ ಎಂಬುದಕ್ಕೆ ನ್ಯಾಯಾಲಯಕ್ಕೆ ಸಲ್ಲಿಸಿರುವ ದೋಷಾರೋಪಣ ಪಟ್ಟಿ ಸಾಕ್ಷಿಯಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ ಹೇಳಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಆತ್ಮಹತ್ಯೆಗೆ ಶರಣಾದ ವಾಲ್ಮೀಕಿ ಅಭಿ ವೃದ್ಧಿ ನಿಗಮದ ಪ್ರಾಮಾಣಿಕ ದಲಿತ ಅಧಿಕಾರಿ ಚಂದ್ರಶೇಖರನ್ ತಮ್ಮ ಡೆತ್‌ ನೋಟ್‌ನಲ್ಲಿ ಸಚಿವ ನಾಗೇಂದ್ರರ ಮೌಖಿಕ ಆದೇಶದಂತೆ ಅವ್ಯವಹಾರ ನಡೆದಿದೆ ಎಂದು ಸ್ಪಷ್ಟವಾಗಿ ಉಲ್ಲೇಖಿಸಿದ್ದರೂ ಎಸ್‌ಐಟಿ ನ್ಯಾಯಾಲಯಕ್ಕೆ ಸಲ್ಲಿಸಿರುವ ದೋಷಾರೋಪ ಪಟ್ಟಿಯಲ್ಲಿ ಮಾಜಿ ಸಚಿವ ನಾಗೇಂದ್ರ ಹಾಗೂ ಶಾಸಕ ಬಸವರಾಜ ದದ್ದಲ್ ಹೆಸರನ್ನು ನಮೂದಿ ಸದಿರುವುದು ಎಸ್ ಐ ಟಿ ತನಿಖೆ ನಿಷ್ಪಕ್ಷಪಾತವಾಗಿ ನಡೆಯುತ್ತಿಲ್ಲ ಎಂಬುದಕ್ಕೆ ಮತ್ತೊಂದು ಸಾಕ್ಷಿಯಾಗಿದೆ ಎಂದಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರೇ, ಮಾಜಿ ಸಚಿವ ನಾಗೇಂದ್ರ ಹಾಗೂ ಶಾಸಕ ದದ್ದಲ್ ಅವರ ಹೆಸರನ್ನು ನಮೂದಿಸಿದರೆ ಅವರು ತಮ್ಮ ಹೆಸರು ಬಾಯಿ ಬಿಡುತ್ತಾರೆ ಎಂಬ ಭಯವೇ? ಅಥವಾ ಈ ಹಗರಣವನ್ನು ಶಾಶ್ವತವಾಗಿ ಮುಚ್ಚಿ ಹಾಕುವ ಹುನ್ನಾರವೇ? ಎಂದು ಪ್ರಶ್ನಿಸಿದ್ದಾರೆ.

   

Related Articles

error: Content is protected !!