Home » ನಂದಿನಿ ಹಾಲು ಮತ್ತು ಮೊಸರಿನ ದರ ಪ್ರತಿ ಲೀಟರ್‌ಗೆ 4 ರೂ. ಹೆಚ್ಚಳ
 

ನಂದಿನಿ ಹಾಲು ಮತ್ತು ಮೊಸರಿನ ದರ ಪ್ರತಿ ಲೀಟರ್‌ಗೆ 4 ರೂ. ಹೆಚ್ಚಳ

ಯುಗಾದಿಗೆ ಬೇವಿನ ಕಹಿ ನೀಡಿದ ಸರಕಾರ

by Kundapur Xpress
Spread the love

ಬೆಂಗಳೂರು : ಮೆಟ್ರೋ ಮತ್ತು ಬಸ್ ಪ್ರಯಾಣ ದರ ಏರಿಕೆ, ಮುದ್ರಾಂಕ ಶುಲ್ಕ ಏರಿಕೆ… ಹೀಗೆ ಬೆಲೆ ಏರಿಕೆಯಿಂದ ಈಗಾಗಲೇ ತತ್ತರಿಸಿರುವ ರಾಜ್ಯದ ಜನತೆಗೆ ಕಾಂಗ್ರೆಸ್ ಸರ್ಕಾರ ಯುಗಾದಿ ಹಬ್ಬಕ್ಕೆ ಮತ್ತೆ ಬೆಲೆಯೇರಿಕೆಯ ಬಿಸಿ ನೀಡಿದೆ. ಎಲ್ಲಾ ಮಾದರಿಯ ನಂದಿನಿ ಹಾಲು ಮತ್ತು ಮೊಸರಿನ ದರ ಪ್ರತಿ ಲೀಟರ್‌ಗೆ 4 ರೂ. ಹೆಚ್ಚಳ ಮಾಡಿದೆ. ಕಾಂಗ್ರೆಸ್ ಸರ್ಕಾರ ಕಳೆದೆರಡು ತಿಂಗಳಿಂದ ದರ ಏರಿಕೆ ಪರ್ವಕ್ಕೆ ಕೈ ಹಾಕಿದೆ. ಇದೀಗ ನಂದಿನಿ ಹಾಲಿನ ದರವನ್ನೂ ಹೆಚ್ಚಿಸಿ, ಜನಸಾಮಾನ್ಯರಿಗೆ ಮತ್ತೆ ಹೊರೆ ಕೊಟ್ಟಿದೆ. ನಂದಿನ ಹಾಲಿನ ದರ ಏರಿಕೆಯು ಏ.1ರಿಂದ ಅನ್ವಯವಾಗುವಂತೆ ಜಾರಿಗೆ ಬರಲಿದೆ.

ಒಂದು ಲೀಟರ್‌ಗೆ 4 ರೂ. ದರ ಪರಿಷ್ಕರಣೆ ಮಾಡಲಾಗಿದೆ ಎಂದು ಗುರುವಾರ ವಿಕಾಸಸೌಧದಲ್ಲಿ ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ಮತ್ತು ಸಹಕಾರ ಸಚಿವ ಕೆ.ಎನ್‌.ರಾಜಣ್ಣ ಜಂಟಿ ಸುದ್ದಿಗೋಷ್ಠಿಯಲ್ಲಿ ನಂದಿನಿ ಹಾಲಿನ ದರ ಹೆಚ್ಚಳ ಕುರಿತು ಮಾಹಿತಿ ನೀಡಿದರು.

 

Related Articles

error: Content is protected !!