ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿ ಹನ್ನೆರಡು ದಿನಗಳ ಕಾಲ ಪೊಲೀಸರ ವಿಚಾರಣೆ ಎದುರಿಸಿದ್ದ ಕನ್ನಡ ಚಲನ ಚಿತ್ರರಂಗದ ದರ್ಶನ್ ತೂಗುದೀಪ ಹಾಗೂ ಅವರ ನಾಲ್ವರು ಆಪ್ತರು ಶನಿವಾರ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿದ್ದಾರೆ. ಈಗ ದರ್ಶನ್ ವಿಚಾರ ಣಾಧೀನ ಕೈದಿ ನಂಬರ್ 6109 ಆಗಿದ್ದಾರೆ ವರ್ಷಗಳ ಹಿಂದೆ ತಮ್ಮ ಪತ್ನಿ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತು 52 ದಿನಗಳ ಕಾಲ ವಿಚಾರಣಾಧೀನ ಕೈದಿಯಾಗಿ ಸೆರೆಮನೆ ವಾಸ ಅನುಭವಿಸಿದ್ದ ದರ್ಶನ್ ಈಗ 2ನೇ ಬಾರಿ ಕೊಲೆ ಆರೋಪದಲ್ಲಿ ಜೈಲು ಸೇರಿದ್ದಾರೆ.
ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ನಗರದ ಎಸಿಎಂಎಂ ನ್ಯಾಯಾಲಯಕ್ಕೆ ದರ್ಶನ್, ಅವರ ಆಪ್ತರಾದ ವಿನಯ್, ಪ್ರದೂಷ್ ಹಾಗೂ ಧನರಾಜ್ ಅಲಿಯಾಸ್ ರಾಜನನ್ನು ಶನಿವಾರ ಮಧ್ಯಾಹ್ನ ಪೊಲೀಸರು ಹಾಜರುಪಡಿಸಿದರು. ಆ ವೇಳೆ ಆರೋಪಿಗಳು ಭಾರಿ ಪ್ರಭಾವಿಗಳಾಗಿದ್ದಾರೆ. ಯಾವ ಕಾರಣಕ್ಕೂ ಜಾಮೀನು ಕೊಡಬಾರದು ಎಂದು ಎಸ್. ಪಿ ಪಿ ಪ್ರಸನ್ನಕುಮಾರ್ ವಾದಿಸಿದರು. ಬಳಿಕ ನಾಲ್ವರು ಆರೋಪಿಗಳನ್ನು ನ್ಯಾಯಾಂಗ ಬಂಧ ನಕ್ಕೊಪ್ಪಿಸಿ ನ್ಯಾಯಾಲಯವು ಆದೇಶಿಸಿತು.