Home » ಶುಭದಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಾತೃವಂದನೆ
 

ಶುಭದಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಾತೃವಂದನೆ

by Kundapur Xpress
Spread the love

ಕಿರಿಮಂಜೇಶ್ವರ : ಶುಭದ ಅಂಗ್ಲ ಮಾಧ್ಯಮ ಶಾಲೆ (ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್) ಯಲ್ಲಿ ಮಾತೃ ವಂದನ ಮತ್ತು ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಬೀಳ್ಕೊಡುಗೆ ಸಮಾರಂಭವು ಫೆಬ್ರವರಿ 5ರಂದು ಅದ್ಧೂರಿಯಾಗಿ ನೆರವೇರಿತು. ಕಾರ್ಯಕ್ರಮವನ್ನು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿದ ಖ್ಯಾತ ವಾಗ್ಮಿ ದಾಮೋದರ ಶರ್ಮರವರು ತಂದೆ ತಾಯಿ ಮತ್ತು ಶಿಕ್ಷಕರನ್ನು ದೇವರೆಂದು ಏಕೆ ಕರೆಯುತ್ತಾರೆ? ಎನ್ನುವುದರ ಕುರಿತು ಮಾತನಾಡಿ ವಿದ್ಯಾರ್ಥಿ ಜೀವನದಲ್ಲಿ ಬರುವ ಅಡೆತಡೆಗಳಿಗೆ ಕಿವಿಗೊಡದೆ ಬದುಕನ್ನು ಕಟ್ಟಿಕೊಂಡು ಸಮಾಜದ ಆಸ್ತಿ ಆಗಬೇಕು. ಜೀವನದಲ್ಲಿ ಚಿಕ್ಕ ಚಿಕ್ಕ ಮೌಲ್ಯವನ್ನು ಬೆಳೆಸಿಕೊಂಡು ಬಂದಾಗ ಜೀವನದಲ್ಲಿ ಯಶಸ್ಸನ್ನು ಗಳಿಸಬಹುದೆಂದರು.

ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ಗಣೇಶ್ ಮೋಗವೀರರು ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಗುಣಮಟ್ಟದ ಶಿಕ್ಷಣವನ್ನು ನೀಡುವಲ್ಲಿ ಶಿಕ್ಷಕರು ಅವಿರತವಾಗಿ ಶ್ರಮಿಸುತ್ತಿದ್ದಾರೆ. ಪೋಷಕರು ಶಿಕ್ಷಕರೊಂದಿಗೆ ಕೈಜೋಡಿಸಿದಾಗ ಮಾತ್ರ ವಿದ್ಯಾರ್ಥಿಗಳ ಜೀವನ ಪರಿಪೂರ್ಣವಾಗಿ ರೂಪುಗೊಳ್ಳಲು ಸಾಧ್ಯವೆಂದರು.

ಶುಭದಾ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕಿಯಾಗಿರುವ ದೀಪಿಕಾ ಆಚಾರ್ಯರವರು ಸಭೆಯಲ್ಲಿರುವವರನ್ನು ಸ್ವಾಗತಿಸಿ ವಿದ್ಯಾರ್ಥಿಗಳು ಬದುಕಿನಲ್ಲಿ ಶಿಸ್ತನ್ನು ಅಳವಡಿಸಿಕೊಂಡು ಗುರುಹಿರಿಯರಲ್ಲಿ ಗೌರವಭಾವದೊಂದಿಗೆ ವರ್ತಿಸಿದಾಗ ಜೀವನದಲ್ಲಿ ಧನ್ಯತೆಯನ್ನು ಸಾಧಿಸಬಹುದೆಂದು ತಮ್ಮ ಪ್ರಾಸ್ತಾವಿಕ ನುಡಿಗಳನ್ನಾಡಿದರು.

ವಿದ್ಯಾರ್ಥಿಗಳು ಶಾಲೆ ಮತ್ತು ಶಿಕ್ಷಕರೊಂದಿಗಿನ ಸುದೀರ್ಘ ಅವಧಿಯ ನೆನಪುಗಳನ್ನು ಮೆಲುಕು ಹಾಕಿದರೆ, ಶಿಕ್ಷಕರು ವಿದ್ಯಾರ್ಥಿಗಳ ಜೊತೆ ಕಳೆದ ಸುಮಧುರ ಕ್ಷಣಗಳನ್ನು ನೆನಪಿಸಿಕೊಂಡು ಭಾವುಕರಾದರು. ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಪೋಷಕರು,ಬೋಧಕ/ಬೋಧಕೇತರ ವರ್ಗದವರು ಉಪಸ್ಥಿತರಿದ್ದರು. ಶಿಕ್ಷಕಿಯರಾದ ಶ್ರೀಮತಿ ಕವಿತಾ ವಂದಿಸಿ, ಶ್ರೇಯಾ ಕಾರ್ಯಕ್ರಮವನ್ನು ನಿರೂಪಿಸಿದರು.

 

Related Articles

error: Content is protected !!