218
ಒಟ್ಟಾವಾ : ಕೆನಡಾದಲ್ಲಿ ನಡೆದ ಗುಂಡಿನ ದಾಳಿಯಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿನಿ ಮೃತಪಟ್ಟಿದ್ದಾರೆ. ಅಪರಿಚಿತರ ನಡುವೆ ನಡೆದ ಗುಂಡಿನ ದಾಳಿಯ ವೇಳೆ ಆಕಸ್ಮಿಕವಾಗಿ ಗುಂಡು ತಗುಲಿ, ಭಾರತೀಯ ವಿದ್ಯಾರ್ಥಿನಿ ಹರ್‌ಸಿಮ್ರತ್ ರಾಂಧಾವಾ ಮೃತಪಟ್ಟಿದ್ದಾರೆ.
ಒಟ್ಟೋರಿಯೋದ ಹ್ಯಾಮಿಲ್ಟನ್‌ನಲ್ಲಿರುವ ಮೊಹಾಕ್ ಕಾಲೇಜಿನಲ್ಲಿ ಅಧ್ಯಯನ ನಡೆಸುತ್ತಿದ್ದ ಹರ್ಸಿಮ್ರತ್ ರಾಂಧಾನಾ ಬಸ್ ನಿಲ್ದಾಣದಲ್ಲಿ ಕಾಯುತ್ತಿದ್ದ ವೇಳೆ ಏಕಾಏಕಿ ಅಪರಿಚಿತರ ನಡುವೆ ಗುಂಡಿನ ದಾಳಿ ನಡೆದಿದ್ದು, ಅಲ್ಲಿದ್ದ ರಾಂಧಾವಾಗೆ ಗುಂಡು ತಗುಲಿದೆ ಎಂದು ಪೊಲೀಸರು ತಿಳಿಸಿದ್ದಾರೆ

