ತೆಕ್ಕಟ್ಟೆ : ವಿಶ್ವ ವಿನಾಯಕ ಸಿ.ಬಿ.ಎಸ್.ಇ ಸ್ಕೂಲ್ ತೆಕ್ಕಟ್ಟೆಯಲ್ಲಿ ಮಕ್ಕಳಿಗೆ ಏರ್ಪಡಿಸಿದ ಸಾಂಸ್ಕçತಿಕ ಮತ್ತು ಸಾಹಿತ್ಯಿಕ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಬೇಳೂರು ಕರುಣಾಕರ ಶೆಟ್ಟಿ ಬ್ಯಾಂಕ್ ಬರೋಡ ಕುಂಭಾಶಿ ಇದರ ಮುಖ್ಯ ಪ್ರಬಂಧರಕ ಇವರು ಕಾರ‍್ಯಕ್ರಮವನ್ನು ಉದ್ಘಾಟಿಸಿ ಮಕ್ಕಳಿಗೆ ಬಹುಮಾನ ವಿತರಣೆಯನ್ನು ಮಾಡಿದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಅಭಿನಂದಿಸಿ ಶಾಲೆಯ ಉತೃಷ್ಠ ಸಾಧನೆಗಳ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು. ಗ್ರಾಮೀಣ ಪ್ರದೇಶದಲ್ಲಿ ಇರುವ ಇಂತಹ ಶಾಲೆಗಳಲ್ಲಿ ರಾಷ್ಟç, ಅಂತ ರಾಷ್ಟ್ರೀಯ ಮಟ್ಟದ ಪ್ರತಿಭೆಗಳು ಹುಟ್ಟಿಕೊಳ್ಳುತ್ತವೆ. ಇಂತಹ ಮಕ್ಕಳನ್ನು ಪ್ರೋತ್ಸಾಹಿಸಿ ಮುಂದಿನ ಸಾಧನೆಗೆ ಶಾಲೆ ಹಾಗೂ ಪೋಷಕರು ಸಹಕಾರಿಯಾಗಬೇಕೆಂದು ತಿಳಿಸಿದರು.
ಕಾರ‍್ಯಕ್ರಮದಲ್ಲಿ ರಾಜ್ಯ ಮಟ್ಟದ ಚಿತ್ರ ಕಲಾ ಸ್ಪರ್ದೆಯಲ್ಲಿ ಪ್ರಥಮ ಹಾಗೂ ವಿವಿಧ ಚಿತ್ರ ಕಲಾ ಸ್ಪರ್ಧೆಗಳಲ್ಲಿ ಬಹುಮಾನಗಳನ್ನು ಪಡೆದು ಸಾಧನೆ ಮಾಡಿದ ೮ ನೇ ತರಗತಿ ವಿದ್ಯಾರ್ಥಿ ಯಕ್ಷತ್ ಶೆಟ್ಟಿ ಇವರನ್ನು ಫಲ ಪುಷ್ಪ ಹಾಗೂ ಸ್ಮರಣಿಕೆಯನ್ನು ನೀಡಿ ಸನ್ಮಾನಿಸಲಾಯಿತು.ಕಾರ‍್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲಾ ಮ್ಯಾನೇಜಿಂಗ್ ಡೈರೆಕ್ಟರ್ ಎಮ್. ಪ್ರಭಾಕರ ಶೆಟ್ಟಿಯವರು ಮಾತನಾಡಿ ಬಹುಮಾನ ಎನ್ನುವುದು ಮುಂದಿನ ಸಾಧನೆಗೆ ದಾರಿಯಾಗಬೇಕು ಹಾಗೂ ವಿದ್ಯಾರ್ಥಿಗಳು ಇನ್ನಷ್ಟು ಸಾಧನೆ ಮಾಡುವಂತಾಗಲಿ ಎಂದು ಶುಭ ಹಾರೈಸಿದರು.
ಕಾರ‍್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲ ನಿತಿನ್ ಡಿ’ ಆಲ್ಮೇಡಾ, ಶಿಕ್ಷಕರು, ಪೋಷಕರು ಹಾಗೂ ಶಾಲಾ ಸಿಬ್ಬಂದಿಯವರು ಉಪಸ್ಥಿತರಿದ್ದರು. ಶಿಕ್ಷಕರಾದ ಸಂದಿಪ್ ಸ್ವಾಗತಿಸಿದರು. ಪ್ರೇಮ ರಾವ್ ನಿರೂಪಿಸಿದರು, ಅನುಷಾ ವಂದಿಸಿದರು.

