ಕುಂದಾಪುರ : ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಆಷಾಡಿ ಅಮಾವಾಸ್ಯೆಯ ದಿನ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆಯನ್ನು ಆಚರಿಸಲಾಗುತ್ತಿದೆ ಕುಂದಾಪುರ ನೆಲದ ಭಾಷೆ ಸಂಸ್ಕೃತಿ ಆಚಾರ ವಿಚಾರಗಳು ವೈಶಿಷ್ಟ್ಯ ಪೂರ್ಣವಾಗಿದೆ ಕುಂದಾಪ್ರ ಕನ್ನಡ ಮಾತನಾಡುತ್ತಿರುವ ಎಲ್ಲರಿಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಾಜಿ ಮುಖ್ಯಮಂತ್ರಿ ಬೊಮ್ಮಾಯಿಯವರು ಶುಭಾಷಯ ಕೋರಿದರು
ಆಟಿ ಅಮಾವಾಸ್ಯೆ ದಿನವಾದ ಸೋಮವಾರ ಕುಂದಾಪುರ ಸೇರಿದಂತೆ ರಾಜ್ಯದ ಅನೇಕ ಕಡೆಗಳಲ್ಲಿ ಕುಂದಾಪುರ ಕನ್ನಡಿಗರು ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಿದರು ಬೈಂದೂರು ಶಾಸಕರಾದ ಗುರುರಾಜ್ ಗಂಟಿಹೊಳಿ ಹಾಗೂ ಕುಂದಾಪುರ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿಯವರು ಸರ್ವರಿಗೂ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆಯ ಶುಭಾಶಯಗಳನ್ನು ತಿಳಿಸಿದ್ದಾರೆ